LOCAL NEWS : ಕಲಿಕೇರಿ ಸರ್ಕಾರಿ ಪ್ರೌಢಶಾಲೆಗೆ ತಾ.ಪಂ ಇಓ ಭೇಟಿ!

You are currently viewing LOCAL NEWS : ಕಲಿಕೇರಿ ಸರ್ಕಾರಿ ಪ್ರೌಢಶಾಲೆಗೆ ತಾ.ಪಂ ಇಓ ಭೇಟಿ!

ಕನಕಗಿರಿ: ತಾಲೂಕಿನ ಸುಳೇಕಲ್ ಗ್ರಾಮ ಪಂಚಾಯತ್ ಗೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೆ.ರಾಜಶೇಖರ್ ಅವರು ಸೋಮವಾರ ಭೇಟಿ ನೀಡಿ, ವಿವಿಧ ಕಾಮಗಾರಿಯ ಪ್ರಗತಿಯನ್ನು ಪರಿಶೀಲನೆ ಮಾಡಿದರು.

ನಂತರ ಕಲಿಕೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಅವರು, ಹತ್ತನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಶಾಲಾ ಫಲಿತಾಂಶ ಕಡಿಮೆ ದಾಖಲಾಗಿದ್ದು, ಉತ್ತಮ ಪ್ರಗತಿ ಸಾಧಿಸಲು ವಿದ್ಯಾರ್ಥಿಗಳು ಯಾವ ರೀತಿ ಅಧ್ಯಯನ ಮಾಡಬೇಕು ಎಂಬುದರ ಕುರಿತು ಕೆಲ ಉಪಯುಕ್ತ ಸಲಹೆಗಳನ್ನು ನೀಡಿದರು. ಜೊತೆಗೆ ಹೆಚ್ಚಿನ ಅಂಕಗಳನ್ನು ಪಡೆದು ಶಾಲೆಗೆ ಹಾಗೂ ಊರಿಗೆ, ತಂದೆ-ತಾಯಿಗೆ ಕೀರ್ತಿ ತರಲು ತಿಳಿಸಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ಮಹದೇವಪ್ಪ ಸ್ವಾಮಿ, ತಾಂತ್ರಿಕ ಸಂಯೋಜಕರಾದ ಸಯ್ಯದ್ ತನ್ವೀರ್, ಗ್ರಾ.ಪಂ ಕಾರ್ಯದರ್ಶಿ ನಾಗಪ್ಪ, ಸದಸ್ಯ ಬೆಟ್ಟಪ್ಪ, ಗ್ರಾ.ಪಂ ಕಂಪ್ಯೂಟರ್ ಆಪರೇಟರ್ ದುರುಗೇಶ್ ಸೇರಿದಂತೆ ಗ್ರಾ.ಪಂ ಸಿಬ್ಬಂದಿಗಳು ಹಾಜರಿದ್ದರು.

Leave a Reply

error: Content is protected !!