ಯಲಬುರ್ಗಾ
ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರ ನಾಯಕ ಮಾಜಿ ಉಪ ಪ್ರಧಾನ ಮಂತ್ರಿಗಳಾದ ಬಾಬು ಜಗಜೀವನ್ ರಾವ್ ರವರ 116ನೇ ಜಯಂತಿಯ ಗೌರವಪೂರ್ವಕ ನಮನಗಳನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಯಲಬುರ್ಗಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಸವರಾಜ ಉಳ್ಳಾಗಡ್ಡಿ ಮಾತನಾಡಿ ‘ಸಮಾಜದಲ್ಲಿನ ಅಸ್ಪೃಶ್ಯತೆಯನ್ನು ಹೋಗಲಾಡಿಸುವಲ್ಲಿ ಬಾಬೂಜಿ ಕೊಡುಗೆ ಅಪಾರವಾಗಿದೆ. ಜಾತಿ ವ್ಯವಸ್ಥೆಯನ್ನು ತೊಡೆದುಹಾಕಿ ಎಲ್ಲರಲ್ಲೂ ಸಮಾನತೆ ತರುವುದು ಅವರ ಮುಖ್ಯ ಉದ್ದೇಶವಾಗಿತ್ತು. ದೇಶದಲ್ಲಿ ಸಮರ್ಪಕವಾಗಿ ಎಲ್ಲರಿಗೂ ಆಹಾರ ದೊರೆಯದೇ ಇದ್ದಾಗ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಕೃಷಿಯಲ್ಲಿ ಗಣನೀಯ ಬದಲಾವಣೆ ತಂದರು. ಹಸಿರು ಕ್ರಾಂತಿ ರೂಪಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿದರು. ಆಹಾರ ಉತ್ಪಾದನೆ ಹೆಚ್ಚಿಸಿದರು’ ಎಂದು ಬಣ್ಣಿಸಿದರು.
‘ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಪಟ್ಟಿಗೆ ಭಾರತವನ್ನು ಸೇರಿಸುವಲ್ಲಿ ಜಗಜೀವನ ರಾಮ್ ಅವರ ಪಾತ್ರ ಮಹತ್ವದ್ದಾಗಿದೆ. ಸಾಮಾಜಿಕ ಸುಧಾರಣೆ, ಹಸಿರು ಕ್ರಾಂತಿ ಅಲ್ಲದೇ ಇನ್ನೂ ಹಲವಾರು ಕ್ಷೇತ್ರಗಳ ಅಭಿವೃದ್ಧಿಯಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ’ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಎ.ಜಿ ಬಾವಿಮನಿ,ಶಿವಾನಂದ ಬಣಗಾರ ಹಾಗೂ ಕಾಂಗ್ರೇಸ್ ಪಕ್ಷದ ವಿವಿಧ ಪದಾಧಿಕಾರಿಗಳು ಹಾಗೂ ಬಾಬು ಜೆಗಜೀವನ್ ರಾಮ್ ಅಭಿಮಾನಿಗಳು ಭಾವಹಿಸಿದ್ದರು.