ಬೆಂಗಳೂರು : ರಾಜ್ಯದ ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್ ನೀಡಿದ್ದು, ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಪಾರದರ್ಶಕತೆಗೆ ನೂತನ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ರೈತರಿಗಾಗುತ್ತಿರುವ ತೊಂದರೆಗಳನ್ನು ನಿವಾರಿಸುವ ಸಲುವಾಗಿ ಸರ್ಕಾರ ಪಹಣಿ ತಿದ್ದುಪಡಿ ಮತ್ತು ಪೌತಿ ಖಾತೆ ಇತ್ಯಾದಿಗಳ ಇತ್ಯರ್ಥಕ್ಕಾಗಿ ಕಂದಾಯ ಅದಾಲತ್ಗಳನ್ನು ನಡೆಸುತ್ತಿದೆ. ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಕಾರ್ಯವನ್ನು ಆನ್ಲೈನ್ ಮುಖಾಂತರ ನಿರ್ವಹಿಸಲು ಹೊಸ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ… pic.twitter.com/MzjQGbkH2N
ಈ ಕುರಿತು ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಧ್ಯಮಕ್ಕೆ ಮಾ ಹಿತಿ ನೀಡಿದ್ದು, ‘ರೈತರಿಗೆ ಆಗುತ್ತಿರುವ ಸಾಕಷ್ಟು ತೊಂದರೆಗಳಿಗೆ ಇದೀಗ ಇಂದು ಉಪಾಯ ದೊರೆತಿದೆ. ಅದೆನೆಂದರೆ ಈ ತೊಂದರೆಗಳನ್ನು ನಿವಾರಿಸುವ ಸಲುವಾಗಿ ಸರ್ಕಾರ ಪಹಣಿ ತಿದ್ದುಪಡಿ ಹಾಗೂ ಪೌತಿ ಖಾತೆ ಇತ್ಯಾದಿಗಳ ಪರಿಹಾರಕ್ಕಾಗಿ ಕಂದಾಯ ಅದಾಲತ್ ಗಳನ್ನು ನಡೆಸಲಾಗುತ್ತಿದೆ. ಈ ಮೂಲಕ ಆನ್ ಲೈನ್ ಮುಖಾಂತರ ನಿರ್ವಹಿಸಲು ಹೊಸ ತಂತ್ರಾಂಶಗಳನ್ನು ಅಭಿವೃದ್ಧಿ ಪಡೆಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನ ಮಂಡಲ ಕಲಾಪದಲ್ಲಿ ತಿಳಿಸಿದ್ದಾರೆ.