You are currently viewing BREAKING : ಗ್ರಾಮ ಪಂಚಾಯತ್‌ಗಳ ಮೇಲೆ ಲೋಕಾಯುಕ್ತ ದಾಳಿ : ಅಧಿಕಾರಿಗಳ ಎದೆಯಲ್ಲಿ ಡವ್…ಡವ್..!!

BREAKING : ಗ್ರಾಮ ಪಂಚಾಯತ್‌ಗಳ ಮೇಲೆ ಲೋಕಾಯುಕ್ತ ದಾಳಿ : ಅಧಿಕಾರಿಗಳ ಎದೆಯಲ್ಲಿ ಡವ್…ಡವ್..!!

ಪ್ರಜಾ ವೀಕ್ಷಣೆ ಸುದ್ದಿಜಾಲ:

PV ನ್ಯೂಸ್ ಡೆಸ್ಕ್- ಬೆಂಗಳೂರು : ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್‌ಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಇಂದಿನ ದಾಳಿಯಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರದ ವಿವಿಧ ಗ್ರಾಮ ಪಂಚಾಯತಿಗಳ ಮೇಲೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಅಣ್ಣೇಶ್ವರ, ಜಾಲಿಗೆ, ಮಜರಾ ಹೊಸಹಳ್ಳಿ, ಬೂದಿಹಾಳ, ಸೋಂಪುರ, ನಂದಗುಡಿ, ಸೂಲಿಬೆಲೆ ಗ್ರಾಮ ಪಂಚಾಯಗಳ ಸೇರಿದಂತೆ ವಿವಿಧ ಗ್ರಾಮ ಪಂಚಾಯತಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಅದಲ್ಲದೇ ಬೆಂಗಳೂರು ಗ್ರಾಮಾಂತರದ ಕಲಘಟ್ಟಪುರ, ಬನ್ನೇರುಘಟ್ಟ, ಕಲ್ಲುಬಾಳ, ಕಣ್ಣೂರು, ಕುಂಬಳಗೋಡು, ಅಗರ, ದಾಸನಪುರ, ಅಡಕಮಾರನಹಳ್ಳಿ ಸೇರಿದಂತೆ ವಿವಿಧ ಗ್ರಾಮ ಪಂಚಾಯತಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಕುರಿತು ದೇವನಹಳ್ಳಿಯಲ್ಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಮಾಹಿತಿ ನೀಡಿದ್ದು, ಇ-ಖಾತಾ ಸೇರಿದಂತೆ ಹಲವು ಅಕ್ರಮಗಳ ಸಂಬಂಧ ಗ್ರಾಮ ಪಂಚಾಯತಿಗಳ ಮೇಲೆ ದಾಳಿಯನ್ನು ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!