ಹೊಸಪೇಟೆ (ವಿಜಯನಗರ) : 2023-24ನೇ ಸಾಲಿನ ಆರ್‌ಐಡಿಎಫ್-29 ಯೋಜನೆಯಡಿ ಹೊಸಪೇಟೆ ನಗರದ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ 1.91 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಿಸಿ ರಸ್ತೆ ಮತ್ತು ಒಳಚರಂಡಿ ಕಾಮಗಾರಿಗೆ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಆರ್. ಗವಿಯಪ್ಪ ಅವರು ಭೂಮಿಪೂಜೆ ನೆರವೇರಿಸಿದರು.
ಹೊಸಪೇಟೆ ನಗರದಲ್ಲಿನ ಎಪಿಎಂಸಿ ಪ್ರಾಂಗಣದಲ್ಲಿ ಕೃಷಿ ಮಾರಾಟ ಇಲಾಖೆಯಿಂದ ಆಗಸ್ಟ್ 8ರಂದು ನಡೆದ ಭೂಮಿ ಪೂಜೆ ಸಮಾರಂಭದ ವೇದಿಕೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ರೈತರು ನಮ್ಮೆಲ್ಲರ ಜೀವನಾಡಿಯಾಗಿದ್ದಾರೆ. ಕೃಷಿಯನ್ನೇ ನಂಬಿ ಜೀವನ ನಡೆಸುವ ರೈತರು ಮಾರುಕಟ್ಟೆಗೆ ಬಂದು ಹೋಗಲು ಅನುಕೂಲವಾಗಲಿ ಎಂದು ಈ ಕಾಮಗಾರಿಯನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು. ಹೊಸಪೇಟೆ ನಗರವು ಈ ಭಾಗದ ಪ್ರಮುಖ ವಾಣಿಜ್ಯ ಕೇಂದ್ರವಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ರೈತರು ನಮ್ಮ ದೇಶದ ಬೆನ್ನೆಲಬು ಆಗಿದ್ದಾರೆ. ಸಾಧ್ಯವಾದಷ್ಟು ಅವರಿಗೆ ಬೆಂಬಲ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಮಾರುಕಟ್ಟೆಗೆ ಬರುವ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದAತೆ ನೋಡಿಕೊಳ್ಳಬೇಕು. ಹಗಲು ರಾತ್ರಿಯನ್ನದೇ ಬೆವರು ಹರಿಸಿ ದುಡಿಯುವ ರೈತರು ಯಾವುದೇ ಸಮಯದಲ್ಲಿ ಬಂದಾಗ ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿಗಳು ಅವರಿಗೆ ಸ್ಪಂದನೆ ನೀಡಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಸಲಹೆ ಮಾಡಿದರು. ಹೊಸಪೇಟೆ ಎಪಿಎಂಸಿ ಪ್ರಾಂಗಣದ ಗೇಟ್ ನಂ.3ರಲ್ಲಿ ನಿರ್ಮಿತಿ ಕೇಂದ್ರದಿAದ ಈಗಾಗಲೇ 2 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಡ್ರೆöÊನೇಜ್ ಕಾಮಗಾರಿ ಪ್ರಗತಿಯಲ್ಲಿರುತ್ತದೆ. ಅದೇ ರೀತಿ ಗೇಟ್ ನಂ.1ರಲ್ಲಿ 1.91 ಕೋಟಿ ರೂ.ವೆಚ್ಚದ ಕಾಮಗಾರಿಗೆ ಇದೀಗ ಚಾಲನೆ ನೀಡಲಾಗಿದೆ. ಸಂಬAಧಿಸಿದ ಗುತ್ತಿಗೆದಾರರು ಈ ಬಗ್ಗೆ ಕಾಳಜಿ ವಹಿಸಿ ಗುಣಮಟ್ಟದ ಬಗ್ಗೆ ಗಮನ ಹರಿಸಿ ಕಾಮಗಾರಿಯನ್ನು ಕಾಲಮಿತಿಯೊಳಗಡೆ ಪೂರ್ಣಗೊಳಿಸಬೇಕು ಎಂದು ಶಾಸಕರು ಕಟ್ಟುನಿಟ್ಟಿನ ನಿರ್ದೆಶನ ನೀಡಿದರು.
ಈ ಎಪಿಎಂಸಿ ಪ್ರಾಂಗಣದಲ್ಲಿ ಶಿಥಲಗೃಹ ನಿರ್ಮಾಣ, ಸಂತೆ ಮಳಿಗೆ ನಿರ್ಮಾಣಕ್ಕೆ ಈಗಾಗಲೇ ಪ್ರಸ್ತಾವನೆ ಸಿದ್ದಪಡಿಸಿ ಸಲ್ಲಿಸಲಾಗಿದೆ ಎಂದು ಶಾಸಕರು ತಿಳಿಸಿದರು. ಹೊಸಪೇಟೆ ಎಂಪಿಎAಸಿ ಮಾರುಕಟ್ಟೆಯನ್ನು ಜನಸ್ನೇಹಿ ಮಾರುಕಟ್ಟೆಯನ್ನಾಗಿ ಮಾರ್ಪಡಿಸಬೇಕಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಲಾಗುವುದು. ಹೊಸಪೇಟೆ ಮಾರುಕಟ್ಟೆಯಲ್ಲಿ ವ್ಯಾಪಾರ ವಾಹೀವಾಟಿಗೆ ಹೆಚ್ಚಿನ ಅನುಕೂಲವಾಗುವ ನಿಟ್ಟಿನಲ್ಲಿ ಯೋಜಿಸಿ ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸಿ ಸೂಕ್ತವಾದ ಅನುದಾನ ಪಡೆದು ಮುಂದಿನ ದಿನಗಳಲ್ಲಿ ಮಾರುಕಟ್ಟೆಯನ್ನು ಸಮಗ್ರ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕರು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ನಿಂಗಪ್ಪ ಗುಜ್ಜಲ, ತೋಟಪ್ಪ ಕಡ್ಡಿರಾಂಪುರ, ಬಸವರಾಜ ದೇವರಮನಿ, ಎಪಿಎಂಸಿ ಕಾರ್ಯದರ್ಶಿ ಸಿದ್ದಯ್ಯಸ್ವಾಮಿ, ಸಹಾಯಕ ನಿರ್ವಾಹಕ ಅಭಿಯಂತರರಾದ ಸುದರ್ಶನ, ವರ್ತಕರು, ಪೇಟೆ ಕಾರ್ಯಕರ್ತರು ಮತ್ತು ರೈತರು ಉಪಸ್ಥಿತರಿದ್ದರು.