ಹೊಸಪೇಟೆ (ವಿಜಯನಗರ) : ವಸತಿ, ವಕ್ಫ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಆಗಸ್ಟ್ ಮಾಹೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಆಗಸ್ಟ್ 13 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಮುಖ್ಯಮಂತ್ರಿಗಳೊಂದಿಗೆ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 11 ಗಂಟೆಗೆ ಜಿಂದಾಲ್ ಏರ್‌ಕ್ರಪ್ಟ್ ಗೆ ಆಗಮಿಸುವರು. ಅಲ್ಲಿಂದ ರಸ್ತೆ ಮೂಲಕ ನಿರ್ಗಮಿಸಿ ಹೊಸಪೇಟೆ ನಗರಕ್ಕೆ ಆಗಮಿಸಿ ಮಧ್ಯಾಹ್ನ 12.30ಕ್ಕೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ತುಂಗಭದ್ರ ಜಲಾಶಯಕ್ಕೆ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಬಳಿಕ ಟಿ.ಬಿ.ಡ್ಯಾಮ್‌ನ ವೈಕುಂಠ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು.
ಆಗಸ್ಟ್ 14ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹೊಸಪೇಟೆಯ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯುವ ಮೊದಲನೇಯ ತ್ರೈ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ನಂತರ ಸಂಜೆ 5 ರಿಂದ 6 ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯುವ ಜಿಲ್ಲೆಯ ಅತಿವೃಷ್ಟಿ ಅನಾವೃಷ್ಟಿಯ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸುವರು. ಬಳಿಕ ಟಿ.ಬಿ.ಡ್ಯಾಮ್‌ನ ವೈಕುಂಠ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು.
ಆಗಸ್ಟ್ 15ರಂದು ಬೆಳಿಗ್ಗೆ 8.45ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಬೆಳಿಗ್ಗೆ 10 ಗಂಟೆಗೆ ಹೊಸಪೇಟೆ ತಾಲೂಕಿನ ಕೊಂಡನಾಯಕನಹಳ್ಳಿಯಲ್ಲಿ ಪಕ್ಷದಿಂದ ನಡೆಯುವ ಸ್ವಾತಂತ್ರ್ಯದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ 11.30ಕ್ಕೆ ಹೊಸಪೇಟೆಯಿಂದ ನಿರ್ಗಮಿಸಿ ಬಳ್ಳಾರಿ ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.