ಕನಕಗಿರಿ : ಸ್ವಾತಂತ್ರ್ಯ ಹೋರಾಟಗಾರರಿಗೆ ದೇಶ ಚಿರಋಣಿಯಾಗಿದ್ದು, ಅವರ ತ್ಯಾಗ ಬಲಿದಾನವನ್ನು ಸ್ಮರಿಸುವ ದಿನ ಇದಾಗಿದೆ ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ರಾಜಶೇಖರ್ ಅವರು ಹೇಳಿದರು.
ತಾಲೂಕು ಪಂಚಾಯತಿ ಆವರಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ನಮ್ಮ ಭಾರತ ದೇಶ ಸುಲಭವಾಗಿ ಸ್ವಾತಂತ್ರ್ಯ ಪಡೆಯಲಿಲ್ಲ. ಅನೇಕ ಹೋರಾಟಗಾರರ ತ್ಯಾಗ, ಬಲಿದಾನದಿಂದ ಸ್ವಾತಂತ್ರ್ಯ ದೊರಕಿದೆ. ವೀರಯೋಧರು ಹಾಗೂ ಹೋರಾಟಗಾರರನ್ನು ಸದಾಕಾಲ ಸ್ಮರಿಸಬೇಕು. ದೇಶ ನಮಗೇನು ನೀಡಿದೆ ಅನ್ನೋದಕ್ಕಿಂತ ದೇಶಕ್ಕೆ ನಾವು ಏನು ನೀಡಿದ್ದೇವೆ ಎಂಬುದು ಮುಖ್ಯ ಆಗುತ್ತದೆ. ಪ್ರತಿಯೊಬ್ಬರೂ ದೇಶಾಭಿಮಾನ ಬೆಳೆಸಿಕೊಳ್ಳಬೇಕು. ದೇಶದ ಏಳ್ಗೆಗೆ ಶ್ರಮಿಸಬೇಕು ಎಂದರು.
ಈ ವೇಳೆ ಕೆಡಿಪಿ ನಾಮನಿರ್ದೇಶನ ಸದಸ್ಯರಾದ ಶರಣಪ್ಪ ತೆಗ್ಗಿನಮನಿ, ಕೆ.ವೀರವೆಂಕಟ ವಿರುಪಾಕ್ಷಿ, ಯಲ್ಲಪ್ಪ ಉದ್ದಿಹಾಳ ಹಾಗೂ ಗ್ಯಾರಂಟಿ ಯೋಜನೆಯ ತಾಲೂಕು ಸಮಿತಿ ಅಧ್ಯಕ್ಷ ಹಜರತ್ ಹುಸೇನ್ ಸೇರಿದಂತೆ ತಾಲೂಕು ಪಂಚಾಯತಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.