ALERT : ಲ್ಯಾಪಟಾಪ್, ತ್ರಿಚಕ್ರ ವಾಹನ ಖರೀದಿಗೆ ಸಹಾಯಧನ! & ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ !

You are currently viewing ALERT : ಲ್ಯಾಪಟಾಪ್, ತ್ರಿಚಕ್ರ ವಾಹನ ಖರೀದಿಗೆ ಸಹಾಯಧನ! & ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ !

ಲ್ಯಾಪಟಾಪ್, ತ್ರಿಚಕ್ರ ವಾಹನ ಖರೀದಿಗೆ ನಗರಸಭೆಯಿಂದ ಸಹಾಯಧನ

ಹೊಸಪೇಟೆ (ವಿಜಯನಗರ) : 2024-25ನೇ ಸಾಲಿನ ಎಸ್.ಎಫ್.ಸಿ. ಯೋಜನೆ ಅಡಿಯಲ್ಲಿ ವ್ಯಕ್ತಿ ಸಂಬAಧಿತ ಅನುಕೂಲಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ವೈಯಕ್ತಿಕ ಫಲಾನುಭವಿಗಳಾಗ ಬಯಸುವವರು ಯೋಜನೆಯಡಿ ಅರ್ಜಿಯನ್ನು ಸೆಪ್ಟಂಬರ್ 12ರೊಳಗಾಗಿ ಹೊಸಪೇಟೆ ನಗರಸಭೆ ಕಾರ್ಯಾಲಯಕ್ಕೆ ಸಲ್ಲಿಸಬಹುದು.

ಹೊಸಪೇಟೆ ನಗರದ ಎಂ.ಬಿ.ಬಿ.ಎಸ್ ಅಥವಾ ಬಿ.ಇ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಖರೀದಿಗಾಗಿ 50.000 ರೂ. ಮೀರದಂತೆ ಸಹಾಯಧನ ನೀಡಲಾಗುವುದು. ಹೊಸಪೇಟೆ ನಗರದ ಇತರೆ ಬಡಜನರಿಗೆ ಶಸ್ತ್ರ ಚಿಕಿತ್ಸೆಗೆ ಸಹಾಯಧನ ನೀಡಲಾಗುವುದು. ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಕ್ರೀಡೆ, ಕಲೆ, ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಹೊಸಪೇಟೆ ನಗರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುವುದು. ಹೊಸಪೇಟೆ ನಗರದ ಸರ್ಕಾರಿ ಶಾಲೆಗಳು, ಕಾಲೇಜುಗಳು, ಸರ್ಕಾರದ ವೃತ್ತಿಪರ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುವುದು. ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಬರುವ ವಿಕಲಚೇತನರಿಗೆ ಸಹ ತ್ರಿ-ಚಕ್ರ ವಾಹನ ಖರೀದಿಸಿ ನೀಡಲಾಗುವುದು.
ಎಸ್.ಎಫ್.ಸಿ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಸಂದರ್ಭದಲ್ಲಿ ಅತಿ ಕಡುಬಡವರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಫಲಾನುಭವಿಗಳು ಕುಟುಂಬದ ಆದಾಯ ಪ್ರಮಾಣ ಪತ್ರ ಹಾಗೂ ಇತರೆ ದಾಖಲಾತಿಗಳನ್ನು ನೀಡಿ ಸಹಾಯಧನಕ್ಕೆ ಅರ್ಜಿ ಸಲ್ಲಿಸತಕ್ಕದ್ದು. ( ಫಲಾನುಭವಿಗಳು ತಪ್ಪು ದಾಖಾಲಾತಿ ಮತ್ತು ತಪ್ಪು ಮಾಹಿತಿ ನೀಡಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು) ಹೆಚ್ಚಿನ ಮಾಹಿತಿಯನ್ನು ಹಾಗೂ ಅರ್ಜಿ ನಮೂನೆಯನ್ನು ಕಾರ್ಯಾಲಯದ ವಿಷಯ ನಿರ್ವಾಹಕರಿಂದ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ  www.hospetcity.gov.in ವೆಬ್‌ಸೈಟ್ ಅನ್ನು ಸಂಪರ್ಕಿಸಿ ಮಾಹಿತಿಯ ವಿವರವನ್ನು ಪಡೆದುಕೊಳ್ಳಬಹುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 


ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ!

 

ಹೊಸಪೇಟೆ (ವಿಜಯನಗರ) : ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನ ವಿವಿಧ ಯೋಜನೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ಸಾಲ ಯೋಜನೆ: ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿ ಫಲಾನುಭವಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ, ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ 2 ಲಕ್ಷ ರೂಗಳವರೆಗೆ ಆರ್ಥಿಕ ನೆರವು. 1 ಲಕ್ಷ ರೂಗಳವರೆಗಿನ ಸಾಲದಲ್ಲಿ 20 ರಷ್ಟು ಗರಿಷ್ಠ 20,000 ರೂಗಳ ಸಹಾಯಧನ ಹಾಗೂ 1.01 ಲಕ್ಷದಿಂದ 2 ಲಕ್ಷದವರೆಗೆ 15 ರಷ್ಟು ಕನಿಷ್ಠ 20,000 ರೂಗಳವರೆಗೆ ಗರಿಷ್ಠ 30,000 ರೂ ಸಹಾಯಧನ ಉಳಿದ ಮೊತ್ತ 4 ರಷ್ಟು ಬಡ್ಡಿದರದಲ್ಲಿ ನಿಗಮದಿಂದ ನೇರವಾಗಿ ಸಾಲ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000 ರೂಗಳು ಪಟ್ಟಣ ಪ್ರದೇಶದವರಿಗೆ 1,20,000 ರೂಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

ಗಂಗಾ ಕಲ್ಯಾಣ ನೀರಾವರಿ ಯೋಜನೆ: ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದ ಜನಾಂಗದ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಒಟ್ಟು ಘಟಕ ವೆಚ್ಚ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಗೆ 4.75 ಲಕ್ಷ ರೂ ಇದರಲ್ಲಿ ವಿದ್ಯುದ್ದೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ 75,000 ರೂ.ಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುವುದು. ಇನ್ನುಳಿದ ಜಿಲ್ಲೆಗಳಿಗೆ 3.75 ಲಕ್ಷ ರೂಗಳು ಇದರಲ್ಲಿ ವಿದ್ಯುದ್ದೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ 75,000 ರೂಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುವುದು.

ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ 50,000 ರೂಗಳ ಸಾಲವನ್ನು 4 ರಷ್ಟು ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ಯೋಜನೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಉಳಿದ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊAಡAತೆ ಇರುವ ಕನಿಷ್ಠ 2 ಎಕರೆ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು.

ಅರಿವು-ಶೈಕ್ಷಣಿಕ ಸಾಲ ಯೋಜನೆ: ಈ ಯೋಜನೆಯಡಿ ಸಿಇಟಿ ಮತ್ತು ಎನ್‌ಇಇಟಿ ಇತ್ಯಾದಿ ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಾದ ಇಂಜಿನಿಯರಿAಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್ಗಳ ವ್ಯಾಸಂಗಕ್ಕೆ ವಾರ್ಷಿಕ 1 ಲಕ್ಷ ರೂಗಳಂತೆ ಕೋರ್ಸ್ ಅವಧಿಗೆ ಗರಿಷ್ಠ 4 ಲಕ್ಷ ರೂಗಳಿಂದ 5ಲಕ್ಷ ರೂಗಳಿಗೆ ವಾರ್ಷಿಕ 2 ರಷ್ಟು ಬಡ್ಡಿದರಲ್ಲಿ ಸಾಲ ಮಂಜೂರು ಮಾಡಲಾಗುವುದು. ಅಭ್ಯರ್ಥಿ ಮತ್ತು ಅವರ ಕುಟುಂಬದವರ ವಾರ್ಷಿಕ ವರಮಾನವು 3.50 ಲಕ್ಷ ರೂಗಳ ಮಿತಿಯಲ್ಲಿರಬೇಕು.

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ: ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ ಪೋಸ್ಟ್ ಡಾಕ್ಟçಲ್ ಮತ್ತು ಮಾಸ್ಟರ್ ಡಿಗ್ರಿ (ಇಂಜಿನಿಯರಿAಗ್ ಮತ್ತು ಟೆಕ್ನಾಲಜಿ, ಮ್ಯಾನೇಜ್‌ಮೆಂಟ್ ಮತ್ತು ಕಾಮರ್ಸ್, ಸೈನ್ಸ್ ಮತ್ತು ಟೆಕ್ನಾಲಜಿ, ಅಗ್ರಿಕಲ್ಟರ್ ಮತ್ತು ಅಲೈಸ್ ಸೈನ್ಸಸ್/ಟೆಕ್ನಾಲಜಿ, ಮೆಡಿಸಿನ್, ಹ್ಯುಮ್ಯಾನಿಟೀಸ್ ಮತ್ತು ಸೋಸಿಯಲ್ ಸೈನ್ಸಸ್) ವ್ಯಾಸಂಗಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದವರಾಗಿರಬೇಕು.

ಕುಟುಂಬದ ವಾರ್ಷಿಕ ಆದಾಯ ಗರಿಷ್ಠ 8ಲಕ್ಷ ರೂಗಳ ಮಿತಿಯಲ್ಲಿರಬೇಕು. ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ 60ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು. ವಾರ್ಷಿಕ ಗರಿಷ್ಠ 10 ಲಕ್ಷ ರೂ ಹಾಗೂ ಪೂರ್ಣ ಕೋರ್ಸ್ನ ಅವಧಿಗೆ 20 ಲಕ್ಷ ರೂಗಳ ಸಾಲವನ್ನು ಬಡ್ಡಿರಹಿತವಾಗಿ ಒದಗಿಸಲಾಗುವುದು. ಸಾಲದ ಭದ್ರತೆಗೆ ನಿಗಮಕ್ಕೆ ಅರ್ಜಿದಾರ, ಜಾಮೀನುದಾರ, ಪೋಷಕರ ಸ್ಥಿರಾಸ್ತಿಯನ್ನು ನಿಗಮಕ್ಕೆ ಆಧಾರ ಮಾಡಬೇಕು. ಅರ್ಜಿಯ ಜೊತೆಯಲ್ಲಿ ವಿದೇಶಿ ವಿಶ್ವವಿದ್ಯಾಲಯದ ಪ್ರವೇಶಪತ್ರ ವಿದ್ಯಾರ್ಥಿಯ ವಿಸಾ ಪಾಸ್ ಪೋರ್ಟ್ ಮತ್ತು ಏರ್ ಟಿಕೇಟ್ ಪ್ರತಿ ಒದಗಿಸಬೇಕು.

ಸ್ವಾವಲಂಬಿ ಸಾರಥಿ ಯೋಜನೆ: ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದ ಜನಾಂಗದ ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನ ಖರೀದಿಗೆ ಬ್ಯಾಂಕ್‌ಗಳಿAದ ಪಡೆಯುವ ಸಾಲಕ್ಕೆ 50 ರಷ್ಟು ಗರಿಷ್ಠ 3 ಲಕ್ಷ ರೂಗಳ ಸಹಾಯಧನ ಮಂಜೂರು ಮಾಡಲಾಗುವುದು. ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000 ರೂಗಳು ಪಟ್ಟಣ ಪ್ರದೇಶದವರಿಗೆ 1.20,000 ರೂಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘು ವಾಹನ ಚಾಲನ ಪರವಾನಗಿಯನ್ನು ಹೊಂದಿರಬೇಕು.

ಸ್ವಯA ಉದ್ಯೋಗ ಸಾಲ ಯೋಜನೆ: ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದವರಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳು, ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕುಗಳ ಮೂಲಕ ಸಾಲ ಪಡೆದಲ್ಲಿ ನಿಗಮದಿಂದ 20 ರಷ್ಟು ಗರಿಷ್ಠ 1 ಲಕ್ಷ ರೂಗಳ ಸಹಾಯಧನ ಮಂಜೂರು ಮಾಡಲು ಉಳಿದ ಮೊತ್ತವನ್ನು ಬ್ಯಾಂಕ್‌ನಿAದ ಸಾಲ ಪಡೆಯುವ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000 ರೂಗಳು ಪಟ್ಟಣ ಪ್ರದೇಶದವರಿಗೆ 1,20,000 ರೂಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಪಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮತ್ತು ನಿಗಮದ ವೆಬ್‌ಸೈಟ್  www.kssdc.karnataka.gov.in ಇಲ್ಲಿ ಆನ್‌ಲೈನ್ ಮೂಲಕ ಅಗಸ್ಟ್ 31 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವಿಜಯನಗರ ಜಿಲ್ಲೆ ತಾಲ್ಲೂಕ ಕಛೇರಿ, 1ನೇ ಮಹಡಿ, ರೂಮ್ ನಂ:04, ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!