ಕಲಬುರಗಿ : ಜಿಲ್ಲೆಯಲ್ಲಿ SSLC ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಸಹಕರಿಸಿದ ಹಿನ್ನೆಲೆಯಲ್ಲಿ ಅಫಜಲ್ಪುರ ತಾಲೂಕಿನ ಗೊಬ್ಬರು ಎಸ್ಎಸ್ ಎಲ್ ಸಿ ಪರೀಕ್ಷಾ ಕೇಂದ್ರದ ಬರೋಬ್ಬರಿ 16 ಶಿಕ್ಷಕರನ್ನು ಅಮಾನತು ಮಾಡಿ ಪರೀಕ್ಷಾ ಮಂಡಳಿ ಅದ್ಹೇಶಿಸಿದೆ.
ಅಫಜಲ್ಪುರ ತಾಲೂಕಿನ ಗೊಬ್ಬೂರ (ಬಿ) ಸರ್ಕಾರಿ ಪ್ರೌಢಶಾಲೆಯಲ್ಲಿ ಕಳೆದ ಏಪ್ರಿಲ್ 3 ರಂದು ನಡೆದ ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಲು ಸಹಕಾರ ಮಾಡಿಕೊಟ್ಟ ಆರೋಪದ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಅಧೀಕ್ಷಕರು, ಕಸ್ಟೋಡಿಯನ್, ಜಾಗೃತದಳ, ಕೋಣೆ ಮೇಲ್ವಿಚಾರಕರು ಸೇರಿ 16 ಶಿಕ್ಷಕರನ್ನು ಅವರ ಕರ್ತವ್ಯದಿಂದ ಅಮಾನತು ಮಾಡಿ ಆದೇಶ ಹೊರಡಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಅಪರ ಆಯುಕ್ತ ಆನಂದ ಮೀನಾ ಅವರು, ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಅವಕಾಶ ಸಹಕಾರ ಕೊಟ್ಟು ಪರೀಕ್ಷೆಯ ಪಾವಿತ್ರ್ಯತೆಯನ್ನೇ ವಿಫಲಗೊಳಿಸಿದ್ದಾರೆ ಜೊತೆಗೆ ಕರ್ತವ್ಯ ಲೋಪ ಎಸಗಿರುವ 16 ಶಿಕ್ಷಕರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.