ದುಂಡಿ ಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ಧರ್ಮಸಭೇ ಕಾರ್ಯಕ್ರಮ
ಲಕ್ಷ್ಮೇಶ್ವರ: ಸಮೀಪದ ಗುಲಗಂಜಿಕೊಪ್ಪ ಗ್ರಾಮದ ಶ್ರೀ ದುಂಡಿ ಬಸವೇಶ್ವರ ಜಾತ್ರಾಮಹೋತ್ಸವ ನಿಮಿತ್ಯವಾಗಿ ಧರ್ಮಸಭೆ ಕಾರ್ಯಕ್ರಮವನ್ನು ಸದ್ಭಕ್ತ ಮಂಡಳಿ ಹಮ್ಮಿಕೊಂಡಿತ್ತು. ಮುಖ್ಯ ಅತಿಥಿಗಳಾಗಿ ಶಾಸಕ ಡಾ. ಚಂದ್ರು.ಕೆ.ಲಮಾಣಿ ಯವರು ದೇವಸ್ಥಾನಕ್ಕೆ ಬೇಟಿ ನೀಡಿ ಶ್ರೀ ಬಸವೇಶ್ವರ ಆಶೀರ್ವಾದ ಪಡೆದು ಶ್ರೀಗಳಿಂದ ಆಶೀರ್ವಚನ ಪಡೆದರು.
ನಂತರ ಜಾತ್ರೆಯ ಪ್ರಯುಕ್ತವಾಗಿ ಆಯೋಜಿಸಿದ್ದ ಧರ್ಮಸಭೆಯಲ್ಲಿ ಪಾಲ್ಗೊಂಡು ಸದ್ಭಕ್ತರನ್ನು ಉದ್ದೇಶಿಸಿ ಮಾತನಾಡಿದರು.
ದಿವ್ಯ ಸಾನಿಧ್ಯವನ್ನು ತುಮಕೂರು ಜಿಲ್ಲೆಯ ನೊಣವಿನಕೆರೆ ಕಾಡಸಿದ್ಧೇಶ್ವರ ಮಠದ ಶ್ರೀ ಮ.ನಿ.ಪ್ರ.ಡಾ.ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಮುಕ್ತಿಮಂದಿರ ಧರ್ಮಕ್ಷೇತ್ರದ ಪರಮಪೂಜ್ಯ ಶ್ರೀ ಷ ಬ್ರ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಮಹಾಸ್ವಾಮಿಗಳು, ಹೂವಿನ ಶಿಗ್ಲಿ ವಿರಕ್ತಮಠದ ಶ್ರೀ ಚನ್ನವೀರ ಮಹಾಸ್ವಾಮಿಗಳು ವಹಿಸಿದ್ದರು. ಈ ಸಂದರ್ಭದಲ್ಲಿ ಜಾತ್ರಾ ಮಹೋತ್ಸವ ಸಮಿತಿಯ ಪದಾಧಿಕಾರಿಗಳು, ಸದ್ಭಕ್ತ ಮಂಡಳಿ ಸದಸ್ಯರು, ಜನಪ್ರತಿನಿಧಿಗಳು, ಮುಖಂಡರು-ಮಹನೀಯರು, ಕಾರ್ಯಕರ್ತ ಇದ್ದರು.