ಗದಗ : ಬಾಂಗ್ಲಾದಲ್ಲಿ ಜನ ಪ್ರಧಾನಿ ಮನೆ ಹೊಕ್ಕರೋ ಅದೇ ರೀತಿ ನಮ್ಮ ದೇಶದಲ್ಲೂ ಪ್ರಧಾನಿ ಮನೆಗೆ ನುಗ್ಗೋದು ದೂರವಿಲ್ಲ ಎಂಬ ರೋಣ ಶಾಸಕ ಜಿ ಎಸ್ ಪಾಟೀಲ್ ಹೇಳಿಕೆ ಖಂಡಿಸಿ ಗದಗನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಇಂದು ಗದಗ ಜಿಲ್ಲಾಡಳಿತ ಭವನದ ಎದುರು ಕಾಂಗ್ರೆಸ್ ಶಾಸಕ ಜಿ.ಎಸ್. ಪಾಟೀಲ್ ವಿರುಧ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿ. ಎಸ್. ಪಾಟೀಲ್ ಬಂಧಿಸಬೇಕು, ದೇಶದ್ರೋಹಿ ಜಿ.ಎಸ್. ಪಾಟೀಲ್ ಅಂತಾ ಕಿಡಿಕಾರಿ ಆಗ್ರಹಿಸಿದರು. ಗದಗ-ಹುಬ್ಬಳ್ಳಿ ರಸ್ತೆ ತಡೆ ನಡೆಸಿ, ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡೆಸಿದರು. ಈ ವೇಳೆಯಲ್ಲಿ ರಸ್ತೆ ತಡೆ ನಡೆಸಿದ್ದರಿಂದಾಗಿ ಕೆಲಹೊತ್ತು ಸಂಚಾರ ಅಸ್ತವ್ಯಸ್ತವಾಗಿ ವಾಹನಗಳು ಸಾಲುಗಟ್ಟಿ ನಿಂತ್ತದ್ದವು. ಇದರಿಂದ ಪೊಲೀಸರಿಂದ ಮನವೊಲಿಕೆ ಕಾರ್ಯ, ಮನವೊಲಿಕೆಗೆ ಬಗ್ಗದ ಬಿಜೆಪಿ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದಕ್ಕೆ ಕೆಲ ಬಿಜೆಪಿ ಕಾರ್ಯಕರ್ತರು ಮುಂದಾದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್ ವಿ ಸಂಕನೂರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ ಅಕ್ಕಿ, ಮುಖಂಡರಾದ ಎಂ ಎಸ್ ಕರಿಗೌಡ್ರ, ವಿ ದಂಡಿನ್, ಶಶಿಧರ ದಿಂಡೂರ, ರಮೇಶ ಸಜ್ಜಗಾರ, ಚಂದ್ರು ತಡಸದ, ಪ್ರಕಾಶ ಅಂಗಡಿ, ವಿಜಯಲಕ್ಷ್ಮಿ ಮಾನ್ವಿ ಸೇರಿದಂತೆ ಕಾರ್ಯಕರ್ತರು ಭಾಗಿಯಾಗಿದ್ದರು.