FLASH : ಮುಡಾ ಹಗರಣ :  ‘ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’

You are currently viewing FLASH : ಮುಡಾ ಹಗರಣ :  ‘ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’

ಮುಡಾ ಹಗರಣ :  ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ಶಿವಮೊಗ್ಗ : ಮೈಸೂರು ಮುಡಾ ಹಗರಣಕ್ಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಾಗಲೇ ಸಂಕಷ್ಟ ಎದುರಾಗಿದ್ದು, ಈ ಪ್ರಕರಣ ಈಗಾಗಲೇ ರಾಜ್ಯದಲ್ಲಿ ಭಾರೀ ಸುದ್ದಿಯಾಗುತ್ತಿದ್ದು, ಇದರ ಮಧ್ಯ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಪ್ರಕರಣದ ಕುರಿತು ತೀರ್ಪು ಬಂದ ಬಳಿಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪರಿಸ್ಥಿತಿ ಕೂಡ ಬರುತ್ತೆ ಎಂದು ಮಹತ್ವದ ಹೇಳಿಕೆ ನೀಡಿದ್ದಾರೆ.

ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಬಿಎಸ್‌ವೈ, ‘ಸಿದ್ದರಾಮಯ್ಯ ಮಾಡಿರುವ ಎಲ್ಲಾ ಹಗರಣಗಳು ಸಾಬೀತು ಆಗುತ್ತಿವೆ. ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಏನಾಗುತ್ತೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಬಿಎಸ್ ಯಡಿಯೂರಪ್ಪ ಹೇಳಿದರು.

Leave a Reply

error: Content is protected !!