You are currently viewing BIG NEWS : ರಾಜ್ಯದ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ..! : “ಉದ್ಯೋಗಿನಿ ಯೋಜನೆ”ಗೆ ಅರ್ಜಿ ಆಹ್ವಾನ..!

BIG NEWS : ರಾಜ್ಯದ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ..! : “ಉದ್ಯೋಗಿನಿ ಯೋಜನೆ”ಗೆ ಅರ್ಜಿ ಆಹ್ವಾನ..!

ಪ್ರಜಾವೀಕ್ಷಣೆ ಸುದ್ದಿಜಾಲ

ರಾಜ್ಯದ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ..! : “ಉದ್ಯೋಗಿನಿ ಯೋಜನೆ”ಗೆ ಅರ್ಜಿ ಆಹ್ವಾನ..!

ಬೆಂಗಳೂರು : ರಾಜ್ಯದ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ದೊರೆತಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ನಗರ ಶಿಶು ಅಭಿವೃದ್ದಿ ಯೋಜನೆಯಡಿಯಲ್ಲಿ “ಉದ್ಯೋಗಿನಿ ಯೋಜನೆ”ಗೆ ಅರ್ಜಿ ಆಹ್ವಾನಿಸಲಾಗಿದೆ. ಇದೇ ಸೆಪ್ಟಂಬರ್ 20ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.

ಮಹಿಳೆಯರಿಗೆ ವ್ಯಾಪಾರ, ಸೇವಾ ಹಾಗೂ ಗುಡಿ ಕೈಗಾರಿಕ ಚಟುವಟಿಕೆಗಳಿಗೆ ಆರ್ಥಿಕ ಸಹಾಯ ನೀಡಲು ಉದ್ದೇಶಿಸಲಾಗಿದ್ದು, ಮಹಿಳಾ ಫಲಾನುಭವಿಗಳು ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

ad- ಜಾಹೀರಾತು.

-: ಬೇಕಾಗುವ ಪ್ರಮುಖ ದಾಖಲೆ :-

1) ನಿಗದಿತ ಅರ್ಜಿ ನಮೂನೆ ಭರ್ತಿ ಮಾಡಿದ ಮೂರು ಪ್ರತಿಗಳಲ್ಲಿ ಜೆರಾಕ್ಸ್,
2) ಜಾತಿ ಪ್ರಮಾಣ ಮತ್ತು ಕುಟುಂಬದ ವಾರ್ಷಿಕ ಆದಾಯ ಪತ್ರ,
3) ಪ್ರಸಕ್ತ ಸಾಲಿನ ಕುಟುಂಬ ಆದಾಯ ಪ್ರಮಾಣ ಪತ್ರ (ತಹಶೀಲ್ದಾರರು ಬಳ್ಳಾರಿ ಇವರು ನೀಡಿರುವ ಆದಾಯ ಪ್ರಮಾಣ ಪತ್ರ)
4) ವಾರ್ಷಿಕ ಆದಾಯ ರೂ.40 ಸಾವಿರ ಒಳಗಡೆ ಇರಬೇಕು.

5) ವಾಸಸ್ಥಳ ಪ್ರಮಾಣ ಪತ್ರ,
6) ಆಧಾರ್ ಕಾರ್ಡ್ ಪ್ರತಿ,
7) ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಸಲ್ಲಿಸಿರಬೇಕು.
8) ಅರ್ಜಿ ಸಲ್ಲಿಸುವ ಮಹಿಳೆಯ ಬ್ಯಾಂಕ್ ಪಾಸ್ ಪುಸ್ತಕದಲ್ಲಿ ಆಧಾರ್ ಮತ್ತು ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು.

ಬ್ಯಾಂಕ್ ಜೆರಾಕ್ಸ್ ಪ್ರತಿಯಲ್ಲಿ ಆಧಾರ್ ಮತ್ತು ಮೊಬೈಲ್ ಸಂಖ್ಯೆ ಕಡ್ಡಾಯವಾಗಿ ಮುದ್ರಿತಗೊಂಡಿರಬೇಕು. ತಮ್ಮ ವಾರ್ಡ್‌ನ ವ್ಯಾಪ್ತಿಗೆ ಒಳಪಟ್ಟ ಬ್ಯಾಂಕಿನಲ್ಲಿ ಅರ್ಜಿದಾರಳು ಖಾತೆಯನ್ನು ಕಡ್ಡಾಯವಾಗಿ ಹೊಂದಿರಬೇಕು. ಜೊತೆಗೆ ಜೆರಾಕ್ಸ್ ಪ್ರತಿಯನ್ನು ಲಗತ್ತಿಸಬೇಕು.

ಕೈಗೊಳ್ಳುವ ಆದಾಯೋತ್ಪನ್ನ ಚಟುವಟಿಕೆಗಳ ಯೋಜನಾ ವರದಿ, ತರಬೇತಿ ಅಥವಾ ಅನುಭವದ ಪತ್ರ. ಇತ್ತೀಚಿನ ಮೂರು ಭಾವ ಚಿತ್ರಗಳು. ಅರ್ಜಿ ಹಾಕುವ ಮಹಿಳಾ ಫಲಾನುಭವಿಗಳ ವಯಸ್ಸು 18 ರಿಂದ 55 ವರ್ಷಗಳ ಒಳಗಿರಬೇಕು ಎಂದು ಇಲಾಖೆ ಸೊತ್ತೋಲೆಯಲ್ಲಿ ತಿಳಿಸಲಾಗಿದೆ.

Prajavikshane

Chandru R Bhanapaur

Leave a Reply

error: Content is protected !!