BIG NEWS : ಆರೋಪಿ ನಟ ದರ್ಶನ್ ಗೆ ರಾಜಾತಿಥ್ಯ ಪ್ರಕರಣ : ತನಿಖೆಯಿಂದ ಹೊರಬಿತ್ತು ಸ್ಫೋಟಕ ಮಾಹಿತಿ..!!
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ, ಆರೋಪಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ್ದು, ಜೈಲು ಸಿಬ್ಬಂದಿಗಳೇ ಎಂದು ಸ್ಪೋಟಕ ಮಾಹಿತಿ ತನಿಖೆಯಲ್ಲಿ ಬಯಲಾಗಿದೆ.
ಈ ಬಗ್ಗೆ ಪೊಲೀಸರಿಂದ ತನಿಖೆಯನ್ನು ನಡೆಸಲಾಗಿತ್ತು. ತನಿಖಾ ಅಧಿಕಾರಿಗಳ ತಂಡ ಪರಪ್ಪನ ಅಗ್ರಹಾರದ 15 ರಿಂದ 20 ಮಂದಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಂತ ನಟ ದರ್ಶನ್ ಗೆ ಜೈಲು ಸಿಬ್ಬಂದಿಳೇ ರಾಜಾತಿಥ್ಯ ನೀಡಿದ್ದಾರೆ ಎಂದು ಹಲವು ಸಿಬ್ಬಂದಿಗಳು ಹೇಳಿಕೆ ನೀಡಿದ್ದಾರೆ.
ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಟೇಬಲ್, ಚೇರ್, ಮಗ್ ನಲ್ಲಿ ಟೀ ಕೊಟ್ಟು ರಾಜಾತಿಥ್ಯ ನೀಡಿದ್ದು ಜೈಲು ಸಿಬ್ಬಂದಿಗಳೇ ಎನ್ನುವ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಒಟ್ಟಾರೆಯಾಗಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ್ದು, ಜೈಲು ಸಿಬ್ಬಂದಿಗಳೇ ಹೊರತು, ಬೇರೆಯಾರೂ ಅಲ್ಲ. ಇದರಲ್ಲಿ ಜೈಲು ಸಿಬ್ಬಂದಿಗಳ ಪಾತ್ರವೇ ಸಂಪೂರ್ಣವಾಗಿದೆ ಎಂಬುದಾಗಿ ತನಿಖೆಯಿಂದ ಸತ್ಯ ಬಹಿರಂಗವಾಗಿದೆ. ಈ ವರದಿಯನ್ನು ಆಧರಿಸಿ ರಾಜ್ಯ ಸರ್ಕಾರದ ತಪ್ಪೆಸಗಿದಂತ ಜೈಲು ಸಿಬ್ಬಂದಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಿದೆ ಎಂದು ಕಾದು ನೋಡಬೇಕಿದೆ.