BREAKING : ಭೀಕರ ರಸ್ತೆ ಅಪಘಾತ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಐವರು ದುರ್ಮರಣ!!
ತುಮಕೂರು: ಜಿಲ್ಲೆಯಲ್ಲಿ ಭೀಕರ ಅಪಘಾತ ನಡೆದಿದ್ದು, ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ದುರ್ಮರಣ ಹೊಂದಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೆರೆಗಳಪಾಳ್ಯದ ಬಳಿಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಮಾರುತಿ ನೆಕ್ಸಾ ಮತ್ತು ಟಿಯಾಗೋ ನಡುವೆ ನಡೆದಂತ ಭೀಕರ ಅಪಘಾತದಲ್ಲಿ ಎರಡು ಕಾರುಗಳ ಚಾಲಕರು, ಓರ್ವ ಬಾಲಕಿ ಸೇರಿದಂತೆ 5 ಜನ ಮೃತ ಪಟ್ಟಿದ್ದಾರೆ.
ಮಹಿಳೆ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಸಮೀಪದ ಮಧುಗಿರಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಮಧುಗಿರಿ ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ಟಿಯಾಗೋ ಹಾಗೂ ತುಮಕೂರಿನಿಂದ ಮಧುಗಿರಿಗೆ ತೆರಳುತ್ತಿದ್ದ ಮಾರುತಿ ನೆಕ್ಸಾ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಈ ಕುರಿತು ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.