ಪ್ರಜಾವೀಕ್ಷಣೆ ಸುದ್ದಿಜಾಲ :-
BIG BREAKING : ಮುಡಾ ಹಗರಣ: ಮುಖ್ಯಮಂತ್ರಿ ಸಿದ್ಧರಾಮಯ್ಯ ಭಾರೀ ಹಿನ್ನಡೆ!! : ರಾಜ್ಯಪಾಲರ ಪ್ರಾಸಿಕ್ಯೂಷನ್ ಗೆ ಹೈ ಕೋರ್ಟ್ ಮನ್ನಣೆ!!
PV NEWS-ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದೆ. ಜೊತೆಗೆ ಸಿಎಂ ಸಿದ್ದರಾಮಯ್ಯನವರಿಗೆ ಈ ಮೂಲಕ ಭಾರೀ ಹಿನ್ನಡೆಯಾಗಿದೆ. ರಾಜ್ಯಪಾಲರ ಪ್ರಾಸಿಕ್ಯೂಷನ್ ಗೆ ಹೈ ಕೋರ್ಟ್ ಮನ್ನಣೆ ನೀಡಿದೆ ಎಂದು ತಿಳಿದು ಬಂದಿದೆ.
ಇಂದು ಹೈಕೋರ್ಟ್ ಮುಡಾ ಹಗರಣ ಸಂಬಂಧ ಮಹತ್ವದ ತೀರ್ಪು ನೀಡಿದ್ದು, ಹೈಕೋರ್ಟ್ ತೀರ್ಪಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಕುಟುಂಬಸ್ಥರೇ ಫಲಾನುಭವಿಗಳಾಗಿದ್ದಾರೆ. ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಗೆ ಖಾಸಗಿ ದೂರುದಾರರೇ ಅನುಮತಿ ಕೊರಬಹುದು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ 17A ಅಡಿ ಅನುಮತಿ ಕೋರಿದ್ದು ಸರಿಯಾಗಿದೆ ಎಂದು ಕೋರ್ಟ್ ಹೇಳಿದೆ.