ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಆಘಾತ..! : ಸಿಎಂ ವಿರುದ್ದ ಜಾರಿ ನಿರ್ದೇಶನಾಲಯಕ್ಕೆ ದೂರು!
ಮೈಸೂರು :ರಾಜ್ಯದ್ಯಂತ ಭಾರೀ ಸದ್ದು ಮಾಡಿ, ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸುತ್ತಿರುವ ಮುಡಾ ಹಗರಣಕ್ಕೆ ಸಂಬಂಧಿಸಿ ಮೈಸೂರು ಲೋಕಾಯುಕ್ತ ಇಲಾಖೆಯಲ್ಲಿ ಎಫ್‌ಐಆರ್ ದಾಖಲಾದ ಬಳಿಕ ಇದೀಗ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಂದ ಮತ್ತೊಂದು ದೂರು ಸಲ್ಲಿಸಿದ್ದಾರೆ.
ಸ್ನೇಹಮಯಿ ಕೃಷ್ಣ ಅವರು ಇ-ಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ತಮ್ಮ ರಾಜಕೀಯ ಅಧಿಕಾರ ದುರ್ಬಳಕೆ ಮಾಡಿಕೊಂಡು 14 ಸೈಟ್ ಪಡೆದಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಈಗಾಗಲೇ ಪ್ರಕರಣಧ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವ ಸ್ನೇಹಮಯಿ ಕೃಷ್ಣ ಇದೀಗ ಜಾರಿ ನಿರ್ದೇಶನಾಲಯಕ್ಕೆ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.