ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ-2 ಆರೋಪಿ ನಟ ದರ್ಶನ ಅವರ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ ಎಂದು ತಿಳಿದು ಬಂದಿದೆ.
ಇಂದು ಬೆಂಗಳೂರಿನ ಸೆಷನ್ಸ್ ಕೋರ್ಟ್ ನಲ್ಲಿ ದರ್ಶನ್ ಪರ ವಕೀಲರು ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಹಾಗಾಗಿ ನಟ ದರ್ಶನ್ ಅವರಿಗೆ ಇಂದು ಜಾಮೀನು ಸಿಗುತ್ತಾ ಎಂದು ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ ಎನ್ನಬಹುದು.
ಇನ್ನು, ನಿನ್ನೆ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪುತ್ರ ವಿನೇಶ್ ಭೇಟಿ ನೀಡಿದ್ದರು. ಈ ವೇಳೆ ವಿನೀಶ್ ದರ್ಶನ್ ಅವರನ್ನು ತಬ್ಬಿಕೊಂಡು ನಿನ್ನ ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಬಿಕ್ಕಿ ಬಿಕ್ಕಿ ಅತ್ತಿರುವ ಪ್ರಸಂಗ ನಡೆಯಿತು ಎಂದು ತಿಳಿದು ಬಂದಿದೆ. ನಿನ್ನೆ ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೇಶ್ ಭೇಟಿಯಾದರು.