ಭಾರತದ ಮೊಟ್ಟ ಮೊದಲು ಮಹಾಕಾವ್ಯ ರಾಮಾಯಣವನ್ನು ರಚಿಸಿದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಇಂದು.
ಸರ್ಕಾರದ ವತಿಯಿಂದ ಇಂದು ಬೆಂಗಳೂರಿನ ವಿಧಾನಸೌಧದ ಬ್ಲಾಂಕೆಟ್ ಹಾಲಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಗುತ್ತಿದೆ.
ಬಸವನಗುಡಿಯ ಶ್ರೀ ಮಹರ್ಷಿ ವಾಲ್ಮೀಕಿ ಮಹಾ ಸಂಸ್ಥಾನ ಆದಿ ಗುರಿ ಪೀಠ ಶ್ರೀ ಬೇಡರ ಕಣ್ಣಪ್ಪ ಸ್ವಾಮಿ ದೇವಾಲಯದಿಂದ ವಾಲ್ಮೀಕಿ ಜ್ಯೋತಿ ಆಗಮನವಾಗಲಿದೆ. ಬಳಿಕ ಬುಡಕಟ್ಟು ಕಲಾತಂಡಗಳ ಪ್ರದರ್ಶನದೊಂದಿಗೆ ಶ್ರೀ ಬಸವೇಶ್ವರ ವೃತ್ತದಿಂದ ಮಹರ್ಷಿ ವಾಲ್ಮೀಕಿ ಭಾವಚಿತ್ರವನ್ನು ಸಾರೋಟದಲ್ಲಿ ಮೆರವಣಿಗೆ ನಡೆಯಲಿದೆ.
ಮತ್ತೊಮ್ಮೆ ನಾಡಿನ ಸಮಸ್ತ ಜನತೆಗೆ ಪ್ರಜಾ ವಿಕ್ಷಣೆ ಡಿಜಿಟಲ್ ಸುದ್ದಿ ಮಾಧ್ಯಮ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿಯ ಹಾರ್ದಿಕ ಶುಭಾಶಯಗಳು.