ಬೆಂಗಳೂರು : ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸರೋಜಾ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅದರೆ ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಮಾಹಿತ ಲಭ್ಯವಾಗಿದೆ.
ಸರೋಜಾ ಅವರ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ ಎಂದು ಬಲ್ಲ ಮೂಲಗಳು ಮಾಹಿತಿ ತಿಳಿಸಿವೆ.