BIG BREAKING : ಅದಿರು ನಾಪತ್ತೆ ಪ್ರಕರಣ : ಸಿಬಿಐ ಅಧಿಕಾರಿಗಳಿಂದ ಕಾಂಗ್ರೆಸ್‌ ಶಾಸಕ ಬಂಧನ!!

You are currently viewing BIG BREAKING : ಅದಿರು ನಾಪತ್ತೆ ಪ್ರಕರಣ : ಸಿಬಿಐ ಅಧಿಕಾರಿಗಳಿಂದ ಕಾಂಗ್ರೆಸ್‌ ಶಾಸಕ ಬಂಧನ!!

ಪ್ರಜಾವೀಕ್ಷಣೆ ಸುದ್ದಿಜಾಲ :-

BIG BREAKING : ಅದಿರು ನಾಪತ್ತೆ ಪ್ರಕರಣ : ಸಿಬಿಐ ಅಧಿಕಾರಿಗಳಿಂದ ಕಾಂಗ್ರೆಸ್‌ ಶಾಸಕ ಬಂಧನ!!

ಬೆಂಗಳೂರು : ಸುಮಾರು 14 ವರ್ಷಗಳ ಹಿಂದಿನ (2010ರ) ಬೇಲೆಕೇರಿ ಬಂಧರಿನಲ್ಲಿನ ಅದಿರು ನಾಪತ್ತೆ ಪ್ರಕರಣ ಸಂಬಂಧಿಸಿಂತೆ ಇಂದು ತೀರ್ಪನ್ನು ನ್ಯಾಯಾಲಯ ಪ್ರಕಟಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ಅಪರಾಧಿ ಎಂದು ತನ್ನ ತೀರ್ಪಿನಲ್ಲಿ ಕೋರ್ಟ್ ಪ್ರಕಟಿಸಿದ್ದು, ಇದಕ್ಕೆ ಸಂಬಂಧಿಸಿದ ವಿಚಾರಕ್ಕೆ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸುವುದಾಗಿ ಕೋರ್ಟ್‌ ತಿಳಿಸಿದೆ.

ಈ ಹಿನ್ನಲೆಯಲ್ಲಿ ಸಿಬಿಐ ಅಧಿಕಾರಿಗಳು ಇಂದು ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ-ಪ್ರತಿವಾದವನ್ನು ಆಲಿಸಿತ್ತು. ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ತೀರ್ಪು ಪ್ರಕಟಿಸಿದೆ. ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ವಾದ ಪ್ರತಿವಾದವನ್ನು ಆಲಿಸಿ, ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ. ಇದೀಗ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲು ಸೇರಿಸಿದೆ ಎಂದು ಮಾಹಿತಿ ಬಂದಿದೆ.

Leave a Reply

error: Content is protected !!