LOCAL NEWS : ಯಲಬುರ್ಗಾ-ಕುಕನೂರು ತಾಲೂಕಿನಲ್ಲಿ 2 ಮೇಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಆರಂಭಕ್ಕೆ ಅನುಮೋದನೆ ನೀಡುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ!
ಕುಕನೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಬೇಡಿಕೆಯಂತೆ 100 ಸಂಖ್ಯಾಬಲದ 75 ಮೆಟ್ರಿಕ್ ನಂತರದ ಬಾಲಕಿಯರ ಹಾಗೂ 75 ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯಗಳನ್ನು 825 ಹುದ್ದೆಗಳ ಸೃಜನೆಯೊಂದಿಗೆ ಜಿಲ್ಲಾ ಕಂದ್ರಗಳಲ್ಲಿ ಪ್ರಾರಂಭಿಸಲು ಮಂಜೂರಾತಿ ನೀಡಿ ಆದೇಶಿಸಲಾಗಿದೆ ಎಂದು ತಿಳಿದು ಬಂದಿದೆ.
ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಸಂಖ್ಯಾಬಲದ 88 ಮೆಟ್ರಿಕ್ ನಂತರದ ಬಾಲಕ/ 100 ಬಾಲಕಿಯರ ವಿದ್ಯಾರ್ಥಿನಿಲಯಗಳನ್ನು ಮಂಜೂರು ಮಾಡಿ ಆದೇಶಿಸಲಾಗಿದ್ದು, ಅದರಂತೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ-ಕುಕನೂರು ತಾಲೂಕಿನಲ್ಲಿ ಬಡ ವಿದ್ಯಾರ್ಥಿ-ವಿದ್ಯಾರ್ಥಿಯನಿಯರು ಅನುಕೂಲವಾಗಲಿಂದಲೇ ತಾಲ್ಲೂಕು ಕೇಂದ್ರಗಳಲ್ಲಿ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲು ಅನುಮೋದನೆ ನೀಡುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದಲ್ಲಿ ಮೇಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಮತ್ತು ಕುಕನೂರು ತಾಲೂಕಿನ ಮಂಗಳೂರು ಗ್ರಾಮದಲ್ಲಿ ಮೇಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವನ್ನು ಪ್ರಾರಂಭಿಸಿಲು ಅನುಮೋದನೆ ನೀಡಲು ಇಲಾಖೆ ಕೋರಿದೆ ಎಂದು ತಿಳಿದು ಬಂದಿದೆ.