STATE NEWS : ದೌರ್ಜನ್ಯ ಪ್ರಕರಣ : ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌..!!

You are currently viewing STATE NEWS : ದೌರ್ಜನ್ಯ ಪ್ರಕರಣ : ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌..!!

ಪ್ರಜಾವೀಕ್ಷಣೆ ಸುದ್ದಿಜಾಲ :-

LOCAL NEWS : ದೌರ್ಜನ್ಯ ಪ್ರಕರಣ : ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌..!!

ಕೊಪ್ಪಳ : ದಲಿತರ ಮೇಲಿನ ದೌರ್ಜನ್ಯ ಪ್ರಕರಣದ ಕುರಿತು ಕೊಪ್ಪಳ ಜಿಲ್ಲಾ ನ್ಯಾಯಾಲಯದ ತೀರ್ಪು ದೇಶದಲ್ಲೇ ಭಾರೀ ಸಂಚಲನ ಮೂಡಿಸಿದೆ. ಆದರೆ, ಇದೀಗ ಮರಕುಂಬಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಜನರಲ್ಲಿ 97 ಮಂದಿಗೆ ಧಾರವಾಡದ ಹೈಕೋರ್ಟ್‌ ಪೀಠವು ಇಂದು ಜಾಮೀನು ಮಂಜೂರು ಮಾಡಿದೆ.

ಪ್ರತಿಯೊಬ್ಬರಿಂದ 50 ಸಾವಿರ ರೂ.ಬೆಲೆಯ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ಪಡೆದು ಮಾನ್ಯ ಹೈಕೋರ್ಟ್‌ ಜಾಮೀನು ನೀಡಿದೆ ಎಂದು ತಿಳಿದು ಬಂದಿದೆ. ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ 2014ರಲ್ಲಿ ನಡೆದ ಅಸ್ಪೃಶ್ಯತೆ ಆಚರಣೆ ಮತ್ತು ಬಳಿಕ ದಲಿತರ ಓಣಿಗೆ ಹೋಗಿ ಗುಡಿಸಲುಗಳಿಗೆ ಬೆಂಕಿ, ಹಚ್ಚಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 101 ಆರೋಪಿಗಳ ವಿರುದ್ದ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿತ್ತು. ಅದರಂತೆ 101 ಜನರ ಅಪರಾಧಿಗಳಲ್ಲಿ 98 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇನ್ನೂ ಮೂವರು ಅಪರಾಧಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ್ದು, ಇದರಿಂದಾಗಿ ಜಾತಿ ನಿಂದನೆ ಕಾಯ್ದೆ ಅನ್ವಯವಾಗಿಲ್ಲ. ಹೀಗಾಗಿ ಈ 3 ಜನರಿಗೆ 5 ವರ್ಷ ಜೈಲು ಶಿಕ್ಷೆ, 2 ಸಾವಿರ ರೂ. ದಂಡ ವಿಧಿಸಲಾಗಿತ್ತು. ಇದೀಗ 97 ಮಂದಿಗೆ ಧಾರವಾಡದ ಹೈಕೋರ್ಟ್‌ ಪೀಠವು ಜಾಮೀನು ಮಂಜೂರು ಮಾಡಿದೆ.

Leave a Reply

error: Content is protected !!