ಮುಖ್ಯ ಮಂತ್ರಿಗಳ ಆರ್ಥಿಕ ಸಲಹಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ಅವರ ಉಪಸ್ಥಿತಿಯಲ್ಲಿ ಸಭೆ..!!
BIG NEWS : ತೆರಿಗೆ ಸಂಗ್ರಹ ವಿಚಾರದಲ್ಲಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ..!
ಬೆಂಗಳೂರು : ರಾಜ್ಯದಲ್ಲಿ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಎಲ್ಲಾ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆ ಹಾಗೂ ಮುಖ್ಯಂಂತ್ರಿಗಳ ಆರ್ಥಿಕ ಸಲಹಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ಅವರ ಉಪಸ್ಥಿತಿಯಲ್ಲಿ ಸಿಎಂ ಕಛೇರಿ ಕೃಷ್ಣಾದಲ್ಲಿ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಮುದ್ರಾಂಕ ಮತ್ತು ನೋಂದಣಿ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು.
-:ವಾಣಿಜ್ಯ ತೆರಿಗೆ ಇಲಾಖೆ:-
1) 2024 ನವೆಂಬರ್ ಅಂತ್ಯದವರೆಗಿನ ಒಟ್ಟು ವಾಣಿಜ್ಯ ತೆರಿಗೆ ಸಂಗ್ರಹಣೆ ಗುರಿ 56,317 ಕೋಟಿ ರೂ.ಇದ್ದು, ಇದುವರೆಗೆ ರೂ.53,103 ಕೋಟಿ ತೆರಿಗೆ ಸಂಗ್ರಹ ಮಾಡಲಾಗಿದೆ. ಇದು ಶೇ.94 ರಷ್ಟು ಸಾಧನೆ ಮಾಡಲಾಗಿದೆ.
2) 2024-25 ಹಣಕಾಸು ಸಾಲಿನ ಒಟ್ಟು ವಾಣಿಜ್ಯ ತೆರಿಗೆ ಸಂಗ್ರಹ ಗುರಿ ರೂ. 84,475 ಕೋಟಿ ಇದೆ.
3) ರಾಜ್ಯ ಜಿಎಸ್‌ಟಿ ಸಂಗ್ರಹದಲ್ಲಿ ಶೇಕಡಾ 15ರ ಬೆಳವಣಿಗೆ ದರ ಸಾಧಿಸಿದೆ. ರಾಜ್ಯದಲ್ಲಿ ನವೆಂಬರ್ ಅಂತ್ಯದವರೆಗೆ ರೂ.13,722 ಕೋಟಿ ಜಿಎಸ್‌ಟಿ ಸಂಗ್ರಹಿಸಲಾಗಿದ್ದು, ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ.
-:ಅಬಕಾರಿ ಇಲಾಖೆ:-
1) 2024-25 ನೇ ಸಾಲಿನಲ್ಲಿ ರೂ. 38,525 ಕೋಟಿ ಅಬಕಾರಿ ರಾಜಸ್ವ ಸಂಗ್ರಹ ಗುರಿ, ನವೆಂಬರ್ ಅಂತ್ಯದವರೆಗೆ ರೂ.23,600 ಕೋಟಿ ಸಂಗ್ರಹಿಸಲಾಗಿದೆ. ಶೇ.61.26 ಗುರಿ ಸಾಧನೆ ಮಾಡಲಾಗಿದೆ.
2) ಕಳೆದ ವರ್ಷಕ್ಕೆ ಹೋಲಿಸಿದರೆ, ಈ ಅವಧಿಯಲ್ಲಿ ರೂ.1,432.23 ಕೋಟಿ ರಾಜ ಸ್ವಸಂಗ್ರಹದಲ್ಲಿ ಹೆಚ್ಚಳವಾಗಿದ್ದು, ಶೇ.6.46 ಬೆಳವಣಿಗೆ ದರ ಸಾಧಿಸಲಾಗಿದೆ.
3) ರಾಜ್ಯದಲ್ಲಿ 2023-24ರಲ್ಲಿ ರೂ. 34,628 ಕೋಟಿ ಅಬಕಾರಿ ರಾಜ ಸ್ವಸಂಗ್ರಹಿಸಲಾಗಿತ್ತು.
4) ರಾಜದಲ್ಲಿ ಜಾಗೃತ ದಳ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು. ಅಬಕಾರಿ ಇಲಾಖೆಯಲ್ಲಿ ಖಾಲಿಯಿರುವ ಗ್ರೂಪ್ ಸಿ ಹುದ್ದೆಗಳನ್ನು ತುಂಬಲು ಕ್ರಮವಹಿಸಬೇಕು.
-:ನೋಂದಣಿ ಮತ್ತು ಮುದ್ರಾಂಕ ಇಲಾಖೆ:-
1) 2024-25 ನೇ ಸಾಲಿನಲ್ಲಿ ರೂ.26 ಸಾವಿರ ಕೋಟಿ ಗುರಿ ನಿಗದಿಪಡಿಸಿದ್ದು, ನವೆಂಬರ್ ಕೊನೆಯವರೆಗೆ ರೂ.15,160.97 ಕೋಟಿ ಸಂಗ್ರಹಿಸಲಾಗಿದ್ದು, ಶೇ.58ರಷ್ಟು ಪ್ರಗತಿ ಸಾಧಿಸಲಾಗಿದೆ.
2) ರಾಜಸ್ವ ಸೋರಿಕೆಯನ್ನು ತಡೆಗಟ್ಟಿ, ರಾಜಸ್ವ ಸಂಗ್ರಹವನ್ನು ಹೆಚ್ಚಿಸಬೇಕು. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.21ರಷ್ಟು ಬೆಳವಣಿಗೆ ದರ ಸಾಧಿಸಲಾಗಿದೆ.
3) ಕಾನೂನು ಬಾಹಿರ ನೋಂದಣಿಗಳಿಗೆ ಕಡಿವಾಣ ಹಾಕಿಬೇಕು.
4) ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಎಲ್ಲಾ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಬೇಕು.
-:ಗಣಿ ಮತ್ತು ಭೂವಿಜ್ಞಾನ ಇಲಾಖೆ:-
1) ಕಳೆದ ವರ್ಷಕ್ಕಿಂತ ಶೇ.10ರಷ್ಟು ಹೆಚ್ಚಿನ ಬೆಳವಣಿಗೆ ದರ ಸಾಧನೆ.
2) ಈ ವರ್ಷದ ಒಟ್ಟು ರಾಜದ ಗುರಿ ರೂ.9000 ಕೋಟಿ ಇದ್ದು, ನವೆಂಬರ್ ಅಂತ್ಯದವರೆಗೆ ರೂ.4,862 ಕೋಟಿ ರಾಜಸ್ವ ಸಂಗ್ರಹಿಸಲಾಗಿದೆ.
3) ಖನಿಜ ಹಕ್ಕು ತೆರಿಗೆ ಅಧಿನಿಯಮ ಜಾರಿಗೆ ಕ್ರಮವಹಿಸಬೇಕು.
4) 2025-26 ನೇ ಸಾಲಿನಲ್ಲಿ ಉಪ ಖನಿಜದಿಂದ ಹೆಚ್ಚುವರಿಯಾಗಿ ರಾಜಸ್ವ ಸಂಗ್ರಹಿಸಲು ಕ್ರಮವಹಿಸಬೇಕು.
5) ಅರಣ್ಯ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.