ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣಾ ಅವರು ಇಂದು ಬೆಳಗಿನ ಜಾವಾ ನಿಧನರಾಗಿದ್ದಾರೆ.
ನಿವಾಸದಲ್ಲಿ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಸದಾಶಿವ ನಗರದ ನಿವಾಸದಲ್ಲಿ ಇಂದು ಮುಂಜಾನೆ 2.30 ರ ಸುಮಾರಿಗೆ ನಿದಾನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣಾ ಅವರು ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಬೆಂಗಳೂರು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಇಡೀ ವಿಶ್ವದಲ್ಲಿ ಮುಂಚೂಣಿಗೆ ತರುವಲ್ಲಿ ಕೃಷ್ಣಾ ಅವರು ಪ್ರಮುಖ ಕಾರಣರಾಗಿದ್ದರು. ಅವರ ಆಡಳಿತದಲ್ಲಿ ಬೆಂಗಳೂರು ಸಿಲಿಕಾನ್ ಸಿಟಿ ಎಂದು ಪ್ರಸಿದ್ದಿ ಪಡೆಯಿತು. ಅವರ ಆಡಳಿತ ಅವಧಿಯ ಅನೇಕ ಯೋಜನೆಗಳು ಇಂದಿಗೂ ಜನಮಾನಸದಲ್ಲಿ ನೆಲೆಗೊಂಡಿವೆ.