ರಾಜ್ಯದಲ್ಲಿ ಇಂದು ಭಾರೀ ಮಳೆ : ನಿನ್ನೆ ಮಳೆಯ ಆರ್ಭಟಕ್ಕೆ 5 ಜನ ಸಾವು

You are currently viewing ರಾಜ್ಯದಲ್ಲಿ ಇಂದು ಭಾರೀ ಮಳೆ : ನಿನ್ನೆ ಮಳೆಯ ಆರ್ಭಟಕ್ಕೆ 5 ಜನ ಸಾವು

ಬೆಂಗಳೂರು : ರಾಜ್ಯದ ಹಲವು ಕಡೆಗಳಲ್ಲಿ ಮುಂಗಾರು ಪೂರ್ಣ ಭಾರೀ ಮಳೆ ಅಬ್ಬರಿಸಿದ್ದು, ಸಿಡಿಲು ಬಡಿದು ಮೂವರು ಸೇರಿ ಐವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಆಗಿದ್ದು, ಗದಗ ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ, ಸಿಡಿಲಬ್ಬರದಿಂದ ಗದಗ ತಾಲೂಕಿನ ಲಿಂಗದಾಳದಲ್ಲಿ ಕುರಿಗಾಯಿ ಶರಣಪ್ಪ (16), ದೇವೇಂದ್ರಪ್ಪ (16) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಕಲಬುರಗಿ ಜಿಲ್ಲೆಯ ಅಫಜಲ್ಪುರ ತಾಲೂಕಿನ ಬಿಲ್ವಾಡಿ ಗ್ರಾಮದ ರೈತ ಬೋಗಪ್ಪ (60) ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನಲ್ಲಿ ಯಂಕುಬಾಯಿ ಕುಲಕರ್ಣಿ (79) ಎಂಬವರು ಹಾಗೂ ಶಾರವ್ವಾ ಪತ್ತಾರ (58) ಮನೆಯ ಚಾವಣಿ ಕುಸಿದು ಮೃತಪಟ್ಟಿದ್ದಾರೆ ಎಂದು ಮಾಹಿತಿ ಇದೆ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಕಡೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಕಲಬುರಗಿ, ಕೊಪ್ಪಳ, ಗದಗ, ಧಾರವಾಡ, ದಕ್ಷಿಣ ಕನ್ನಡ, ದಾವಣಗೆರೆ, ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಹಲವಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ರಾಜ್ಯದಲ್ಲಿ ಇಂದೂ ಸಹ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Reply

error: Content is protected !!