LOCAL NEWS : ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಶಾಸಕ ಚಂದ್ರು ಮನವಿ.

You are currently viewing LOCAL NEWS : ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಶಾಸಕ ಚಂದ್ರು ಮನವಿ.

ಪ್ರಜಾವೀಕ್ಷಣೆ ಸುದ್ದಿ :

LOCAL NEWS : ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಶಾಸಕ ಚಂದ್ರು ಮನವಿ.

ಬೆಂಗಳೂರು : ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಚಂದ್ರು ಲಮಾಣಿ ರವರು ಬೆಂಗಳೂರಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಎಚ್ ಸಿ ಮಹದೇವಪ್ಪ ರವರನ್ನು ಭೇಟಿ ಮಾಡಿದರು.

ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಲೋನಿಗಳಲ್ಲಿ ಸಿ ಸಿ ರಸ್ತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು, ಶಿರಹಟ್ಟಿ ವಿಧಾನಸಭಾ ಕ್ಷೇತ್ರಕ್ಕೆ ಹೊಸ ವಸತಿ ಶಾಲೆಗಳನ್ನು ಮಂಜೂರ ಮಾಡಲು ಹಾಗೂ ಬಹು ದಿನಗಳ ಬೇಡಿಕೆಯಾದ ಮುಂಡರಗಿಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ವಸತಿ ಶಾಲೆಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಅನುದಾನವನ್ನು ಬಿಡುಗಡೆ ಮಾಡಲು ಮನವಿಯನ್ನು ಸಲ್ಲಿಸಿದರು.

ವರದಿ: ವೀರೇಶ್ ಗುಗ್ಗರಿ

Leave a Reply

error: Content is protected !!